ಮಂಡ್ಯ: ಸಾಲಭಾದೆಗೆ ಬೇಸತ್ತ ರೈತ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾಮಲಿಂಗ (55) ಮೃತ ದುರ್ದೈವಿ.ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಕಾಳಕೆಂಪನದೊಡ್ಡಿ ಗ್ರಾಮದಲ್ಲಿ ಘಟನೆ ನಡೆದಿದೆ.

2 ಎಕರೆ ಜಮೀನು ಹೊಂದಿದ್ದ ರೈತ ಕೃಷಿಗಾಗಿ ಲಕ್ಷಾಂತರ ರೂ. ಸಾಲ ಮಾಡಿದ್ದರು. ಸಾಲ ಭಾಧೆಗೆ ಬೇಸತ್ತು ರಾತ್ರಿ ವಿಷ ಸೇವನೆ ಮಾಡಿದ್ದರು. ಮಂಡ್ಯ ಮಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ರಾತ್ರಿ ದಾಖಲು ಮಾಡಲಾಗಿತ್ತು.

ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರೈತನ ಸಾವಿಗೆ ಪರಿಹಾರ ನೀಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.