ಮಂಡ್ಯ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಹಿನ್ನೆಲೆ ಪ್ಲಾಸ್ಟಿಕ್ ಗೋಡೌನ್ವೊಂದು ಹೊತ್ತಿ ಉರಿದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನಲ್ಲಿ ನಡೆದಿದೆ.
ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿ ತಡರಾತ್ರಿ ಈ ಅಗ್ನಿ ಅವಘಡ ಸಂಭವಿಸಿದ್ದು, ಗೋಡೌನ್ನಲ್ಲಿ ಸಂಗ್ರಹಿಸಲಾಗಿದ್ದ ಪ್ಲಾಸ್ಟಿಕ್ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.
ಬೆಂಕಿಯ ತೀವ್ರತೆಯಿಂದಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸಂಪೂರ್ಣವಾಗಿ ಭಸ್ಮವಾಗಿವೆ ಎಂದು ಅಂದಾಜಿಸಲಾಗಿದೆ.
ಘಟನೆಯ ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದೆ. ಘಟನೆಗೆ ಸಂಬಂಧಿಸಿದಂತೆ ಮಳವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

