ಮಂಡ್ಯ; ಜಮೀನಿನ ಬೆಳೆಗಳ ಮಧ್ಯೆ ಗಾಂಜಾ ಬೆಳೆದ ಆರೋಪಿ ಪೊಲೀಸರ ಅತಿಥಿಯಾಗಿದ್ದಾನೆ. ಲಕ್ಷಾಂತರ ಮೌಲ್ಯದ ಗಾಂಜಾ ಗಿಡಗಳನ್ನ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಕಾಶಿಮುರಕನಹಳ್ಳಿ ಗ್ರಾಮದಲ್ಲಿ ಪ್ರಕರಣ ಬೆಳಕಿಗೆ ಬಂದಿದೆ.

ಬೋರೇಗೌಡ ಎಂಬುವರಿಗೆ ಸೇರಿದ ಜಮೀನಿನಲ್ಲಿ ಗಾಂಜಾ ಬೆಳೆಯಲಾಗಿತ್ತು. ಅಡಿಕೆ, ಬಾಳೆ, ತೆಂಗು ಸೇರಿದಂತೆ ವಿವಿಧ ಬೆಳೆ ಜೊತೆ ಬೆಳೆದಿದ್ದ. ಖಚಿತ ಮಾಹಿತಿ ಮೇರೆಗೆ ಅಬಕಾರಿ ಉಪನಿರೀಕ್ಷಕ ನಾಗಭೂಷಣ್ ತಂಡ ದಾಳಿ ನಡೆಸಿದಾಗ, ಈ ವೇಳೆ 17 ಕೆಜಿ ತೂಕದ ಗಾಂಜಾ ಗಿಡಗಳು ಪತ್ತೆಯಾಗಿದೆ. ಕೆ.ಆರ್.ಪೇಟೆ ಅಬಕಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

