ಮಂಡ್ಯ: ಮಂಡ್ಯ ಸೆಸ್ಕಾಂ ಎಇ ಶ್ರೀನಿವಾಸ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 30 ಸಾವಿರ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಲು 75 ಸಾವಿರಕ್ಕೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಅಭಿವೃದ್ಧಿ ಶುಲ್ಕ ಬಿಟ್ಟು ಅನುಮತಿ ನೀಡುವ ಮಾತುಕತೆ ಆಗಿತ್ತು. 30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ದಾಳಿ ನಡೆಸಿದೆ. ಲೋಕಾಯುಕ್ತ ಇನ್ಸ್ ಪೆಕ್ಟರ್ ಬ್ಯಾಟರಾಯಗೌಡ ನೇತೃತ್ವದಲ್ಲಿ ದಾಳಿ ನಡೆದಿದೆ. ಎಇ ಶ್ರೀನಿವಾಸ್ ಅವರನ್ನ ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

