ಮಂಡ್ಯ: ಗಣೇಶ ಮೆರವಣಿಗೆ ವೇಳೆ ಕಲ್ಲುತೂರಾಟ ಪ್ರಕರಣ ಖಂಡಿಸಿ ಇಂದು ಮದ್ದೂರು ಪ್ರವಾಸ ಕೈಗೊಂಡಿರುವ ಶ್ರೀರಾಮ ಸೇನೆ ಸಂಘಟನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ರವರಿಗೆ BNSS ಕಾಯ್ದೆ 163ರ ಅಡಿ ಮಂಡ್ಯ ಜಿಲ್ಲೆ ಪ್ರವೇಶಾವಕಾಶಕ್ಕೆ ನಿರ್ಬಂಧ ಹೇರಲಾಗಿದೆ. ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಆದೇಶ ಹೊರಡಿಸಿದ್ದಾರೆ.

ಇಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯ ರಾತ್ರಿ 12ರವರೆಗೆ ನಿರ್ಬಂಧ ಹೇರಲಾಗಿದೆ. ಹಿಂದೂ ಧರ್ಮದ ಪ್ರಬಲ ಪ್ರತಿಪಾದಕರಾಗಿ, ಪ್ರಚೋದನಾಕಾರಿ, ಕೋಮು ವೈಷಮ್ಯ ಭಿತ್ತುವ,  ಪ್ರಚೋದನಾಕಾರಿ ಭಾಷಣ ಮಾಡುವ ಪ್ರವೃತ್ತಿ ಮುತಾಲಿಕ್ ಗೆ ಇದೆ.

ಮುತಾಲಿಕ್ ವಿರುದ್ಧ ರಾಜ್ಯಾದ್ಯಂತ 30ಕ್ಕೂ ಹೆಚ್ಚು ಪ್ರಕರಣ ದಾಖಲಾಗಿರುವ ಹಿನ್ನೆಲೆ. ಕೋಮು ಸೌಹಾರ್ದತೆಗೆ ಧಕ್ಕೆಯಾಗುವುದನ್ನ ತಪ್ಪಿಸುವ ಕಾರಣಕ್ಕೆ ನಿರ್ಬಂಧ ಹೇರಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.