ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಅವರು ಇದೇ ಫೆಬ್ರವರಿ 23 ರಂದು ಮಂಡ್ಯ ಜಿಲ್ಲೆಯ ಆದಿಚುಂಚನಗಿರಿಗೆ ಭೇಟಿ ನೀಡಲಿದ್ದಾರೆ.
ಪ್ರಧಾನಿ ಮೋದಿ ಫೆ. 23 ರಂದು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿರುವ ಆದಿಚುಂಚನಗಿರಿಗೆ ಭೇಟಿ ನೀಡಿ, ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟನೆ ಮಾಡಲಿದ್ದಾರೆ. ಬಳಿಕ ನಿರ್ಮಲಾನಂದನಾಥ ಶ್ರೀಗಳ ವಾರ್ಷಿಕ ಪಟ್ಟಾಭಿಷೇಕದಲ್ಲಿ ಭಾಗಿಯಾಗಲಿದ್ದಾರೆ.
ಉದ್ಘಾಟನಾ ಕಾರ್ಯಕ್ರಮಗಳ ನಂತರ ಪ್ರಧಾನಿ ಮೋದಿ ಶ್ರೀಕ್ಷೇತ್ರ ಆದಿಚುಂಚನಗಿರಿ ಹಾಗೂ ಧಾರ್ಮಿಕ ವಿಚಾರವಾಗಿ ಜನತೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಪ್ರಧಾನಿ ಮೋದಿ ಆಗಮನದ ಬಗ್ಗೆ ಆದಿಚುಂಚನಗಿರಿ ಶ್ರೀಗಳು ಶೀಘ್ರವೇ ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ.

