ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜಸಾಗರ ಜಲಾಶಯ (ಕೆಆರ್‌ಎಸ್) ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಸೋಮವಾರ ಬಾಗಿನ ಅರ್ಪಿಸಿದರು. ಬೆಳಗ್ಗೆ 11 ಗಂಟೆಗೆ ಅಭಿಜಿನ್ ಮುಹೂರ್ತದಲ್ಲಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ ಅವರು, ನಂತರ ಕಾವೇರಿ ಮಾತೆ ಪ್ರತಿಮೆಗೆ ವಿಶೇಷ ಪೂಜೆ ಸಲ್ಲಿಸಿ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾದರು.
ಬಾಗಿನ ಅರ್ಪಿಸುವ ವೇಳೆ ಸಚಿವರಾದ ಡಾ. ಎಚ್.ಸಿ. ಮಹದೇವಪ್ಪ, ಎನ್. ಚೆಲುವರಾಯಸ್ವಾಮಿ, ವೆಂಕಟೇಶ್, ಮೈಸೂರು ಹಾಗೂ ಮಂಡ್ಯ ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

