ಮಂಡ್ಯ: ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಆರ್ ಐ ಬಿದ್ದಿದ್ದಾರೆ.
ಮಂಡ್ಯ ಜಿಲ್ಲೆ ಹಲಗೂರು ವಿಭಾಗದ ಕಂದಾಯ ನಿರೀಕ್ಷಕ ಮಧುಸೂದನ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದವರು. ತಾಲ್ಲೂಕು ಕಚೇರಿಯಲ್ಲೇ ಲಂಚ ಸ್ವೀಕಾರ ಮಾಡುವಾಗ ಬಲೆಗೆ ಬಿದ್ದಿದ್ದಾರೆ.
ಜಮೀನು ಪೋಡಿ ಮಾಡಿ ಖಾತೆ ಮಾಡಿಕೊಡಲು ರೈತರೊಬ್ಬರು ಅರ್ಜಿ ಸಲ್ಲಿಸಿದ್ದರು. ರೈತನ ಬಳಿ 2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.ಮುಂಗಡ 10 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಲೋಕಾಯುಕ್ತ ಇನ್ಸ್ ಪೆಕ್ಟರ್ ರವಿಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಲಂಚ ಪಡೆಯುತ್ತಿದ್ದ ಆರ್ ಐ ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮೊನ್ನೆಯಷ್ಟೇ ಲಂಚ ಪಡೆಯುತ್ತಿದ್ದ ಎಎಸ್ಐ ಬಂಧಿಸಿದ್ದ ಲೋಕಾಯುಕ್ತ ಪೊಲೀಸರಿಗೆ ಆರ್ ಐ ಸಿಲುಕಿದ್ದಾರೆ.

