ಮಂಡ್ಯ: ಮಂಡ್ಯ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ನೂತನ ಅಧ್ಯಕ್ಷರಾಗಿ ಶಿವಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಕೃಷ್ಣೇಗೌಡ ಆಯ್ಕೆ ಆಗಿದ್ದಾರೆ. ನೂತನ ಅಧ್ಯಕ್ಷ, ಉಪಾಧ್ಯಕ್ಷರು ಆಯ್ಕೆಯಾದ್ರೂ ಅಧಿಕೃತ ಘೋಷಣೆ ಇಲ್ಲ. ನ್ಯಾಯಾಲಯದ ತಡೆಯಾಜ್ಞೆಯಿಂದಾಗಿ ಚುನಾವಣಾಧಿಕಾರಿಗಳು ಫಲಿತಾಂಶ ಪ್ರಕಟಿಸಿಲ್ಲ.

ಕೃಷ್ಣೇಗೌಡರ ಆಯ್ಕೆ ಬಗ್ಗೆ ಹೈಕೋರ್ಟ್ ನಲ್ಲಿ ವಿಚಾರಣೆ ಬಾಕಿ ಇರೋದ್ರಿಂದ ಫಲಿತಾಂಶ ಪ್ರಕಟಿಸದಂತೆ ತಡೆಯಾಜ್ಞೆ ಇದೆ. ಅಧ್ಯಕ್ಷರಾಗಿ ಶಿವಕುಮಾರ್ @ ಉಮ್ಮಡಹಳ್ಳಿ ಶಿವಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ನ ರಘುನಂದನ್ ವಿರುದ್ಧ ಕೃಷ್ಣೇಗೌಡ ಗೆಲುವು ಸಾಧಿಸಿದ್ದಾರೆ.

ಹೈಕೋರ್ಟ್ ವಿಚಾರಣೆ ಮುಗಿದ ಬಳಿಕ ಅಧಿಕೃತವಾಗಿ ಫಲಿತಾಂಶ ಪ್ರಕಟವಾಗಲಿದೆ. ಅಲ್ಲಿವರೆಗೂ ನಿರ್ದೇಶಕರಾಗಿ ಮಾತ್ರ ಮುಂದುವರೆಯಲಿರುವ ನೂತನ ಅಧ್ಯಕ್ಷ, ಉಪಾಧ್ಯಕ್ಷರು.ಅದರ ನಡುವೆಯೂ ನೂತನ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆಗೆ ಕೈ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಶಾಸಕ ಗಣಿಗ ಪಿ.ರವಿಕುಮಾರ್ ನೇತೃತ್ವದಲ್ಲಿ ಸಂಭ್ರಮಾಚರಣೆ ನಡೆದಿದೆ.