ಮಂಡ್ಯ : ಕಂಠಪೂರ್ತಿ ಕುಡಿದು ತೇಲಾಡುತ್ತಿದ್ದ ಯುವಕರನ್ನು ಬಸ್ ಗೆ ಹತ್ತಿಸಿಕೊಂಡಿಲ್ಲ ಎಂಬ ಕಾರಣಕ್ಕೆ ಸರ್ಕಾರಿ ಬಸ್ ಮೇಲೆ ಕಲ್ಲು ತೂರಿದ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದಿದೆ.

ಗುರುವಾರ ಸಂಜೆ ಮದ್ದೂರು ಪಟ್ಟಣದ ಬಾರ್ ವೊಂದರಲ್ಲಿ ಕಂಠ ಪೂರ್ತಿ ಕುಡಿದು ತೂರಾಡುಟ್ಟಿದ್ದ ನಾಲ್ವರು ಯುವಕರು ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಹತ್ತಲು ಮುಂದಾಗಿದ್ದಾರೆ. ಈ ವೇಳೆ ಬಸ್ ನಾ ಕಂಡಕ್ಟರ್ ಸಾರ್ವಜನಿಕರ ಹಿತದೃಷ್ಟಿಯಿಂದ ಪಾನಮತ್ತರಾದ ಯುವಕನನ್ನು ಹತ್ತಿಸಿಕೊಳ್ಳದೆ ಮುಂದೆ ಸಾಗಿದ್ದಾರೆ.

ಈ ವೇಳೆ ಪುಂಡರು ಹಿಂದಿನಿಂದ ಬಸ್ ಗೆ ಕಲ್ಲು ತೂರಾಟ ನಡೆಸಿದ್ದಾರೆ. ತಕ್ಷಣ ಬಸ್ ನಿಲ್ಲಿಸಿದ ಚಾಲಕ ಆರೋಪಿಗಳನ್ನು ಹಿಡಿಯಲು ಮುಂದಾಗಿದ್ದಾರೆ. ಈ ವೇಳೆ ಮೂವರು ಪರಾರಿಯಾಗಿದ್ದು, ಓರ್ವನನ್ನು ಹಿಡಿದು ಥಳಿಸಿದ್ದಾರೆ. ಸದ್ಯ ಸಿಕ್ಕಿಬಿದ್ದ ಯುವಕನನ್ನು ಮದ್ದೂರು ಪೊಲೀಸರಿಗೆ ಒಪ್ಪಿಸಿದ್ದು, ಉಳಿದ ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.