ಮಂಡ್ಯ: ಬಲಮುರಿಯ ಕಾವೇರಿ ನದಿಯಲ್ಲಿ ವಿದ್ಯಾರ್ಥಿ ಮುಳುಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನಲ್ಲಿ ನಡೆದಿದೆ.
ದಾವಣಗೆರೆ ಮೂಲದ ವಿದ್ಯಾರ್ಥಿ ಜಾವಿದ್ (22) ಮೃತ ದುರ್ದೈವಿ. ಬಲಮುರಿಗೆ ವಿದ್ಯಾರ್ಥಿಗಳ ಜೊತೆ ಪ್ರವಾಸಕ್ಕೆಂದು ಬಂದಿದ್ದ ವೇಳೆ ದುರ್ಘಟನೆ ನಡೆದಿದೆ.
ಮೃತ ವಿದ್ಯಾರ್ಥಿ ಜಾವಿದ್ ಮೃತ ದೇಹ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆಗೆ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ರವಾನಿಸಲಾಗಿದೆ. ಕೆ.ಆರ್.ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

