Showing 20 of 152 posts • Page 3 of 8
ಮಂಡ್ಯ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಹಿನ್ನೆಲೆ ಪ್ಲಾಸ್ಟಿಕ್ ಗೋಡೌನ್ವೊಂದು ಹೊತ್ತಿ ಉರಿದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನಲ್ಲಿ ನಡೆದಿದೆ. ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿ ತಡರಾತ್ರಿ ಈ ಅಗ್ನಿ ಅವಘಡ ಸಂಭವಿಸಿದ್ದು, ಗೋಡೌನ್ನಲ್ಲಿ ಸಂಗ್ರಹಿಸಲಾಗಿದ್ದ ಪ್ಲಾಸ್ಟಿಕ್ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಬೆಂಕಿಯ ತೀವ್ರತೆಯಿಂದಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸಂಪೂರ್ಣವಾಗಿ ಭಸ್ಮವಾಗಿವೆ ಎಂದು ಅಂದಾಜಿಸಲಾಗಿದೆ. ಘಟನೆಯ ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದೆ. ಘಟನೆಗೆ ಸಂಬಂಧಿಸಿದಂತೆ ಮಳವಳ್ಳಿ […]
ಪ್ರಧಾನಿ ನರೇಂದ್ರ ಮೋದಿ ಅವರು ಇದೇ ಫೆಬ್ರವರಿ 23 ರಂದು ಮಂಡ್ಯ ಜಿಲ್ಲೆಯ ಆದಿಚುಂಚನಗಿರಿಗೆ ಭೇಟಿ ನೀಡಲಿದ್ದಾರೆ.
ಸವಾರನಿಂದ ನಿಯಂತ್ರಣ ತಪ್ಪಿದ ದ್ವಿಚಕ್ರ ವಾಹನ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ರಭಸವಾಗಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕು ಹುಣಸನಹಳ್ಳಿ ಬಳಿ ಜರುಗಿದೆ.
ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ.
ವಕಾಲತ್ತು ವಿಚಾರದಲ್ಲಿ ಘರ್ಷಣೆಯಾಗಿ ವಕೀಲರಿಬ್ಬರು ಪರಸ್ಪರ ಬಡಿದಾಡಿಕೊಂಡ ಘಟನೆ ಮಂಡ್ಯ ಜಿಲ್ಲೆ ಕೆಆರ್ ಪೇಟೆಯಲ್ಲಿ ಜರುಗಿದೆ.
ಶ್ರೀರಂಗಪಟ್ಟಣದಲ್ಲಿ ಮಾಲಾಧಾರಿಗಳ ಸಂಕೀರ್ತನಾ ಯಾತ್ರೆಗೆ ಕ್ಷಣಗಣನೆ ಆರಂಭವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಭದ್ರತೆ ಒದಗಿಸಲಾಗಿದೆ. ಮೆರವಣಿಗೆ ಮೇಲೆ ಸಿಸಿಟಿವಿ ಹದ್ದಿನ ಕಣ್ಣು ವ್ಯವಸ್ಥೆ ಮಾಡಲಾಗಿದೆ.
ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಮಂಡ್ಯದಲ್ಲಿ ಬೃಹತ್ ಪ್ರತಿಭಟನೆ ನಡೆದಿದೆ. ಖರೀದಿ ಕೇಂದ್ರಗಳ ತೆರೆಯುವಂತೆ ಬಿಜೆಪಿ ರೈತ ಮೋರ್ಚಾದಿಂದ ಮಂಡ್ಯದ ಸಂಜಯ ವೃತ್ತದಲ್ಲಿ ಪ್ರತಿಭಟನೆ ನಡೆದಿದೆ.
ಕುಡಿತ ಬಿಟ್ಟ ಖುಷಿಗೆ ಭೂಪನೊಬ್ಬ ಊರಿನ ಜನರಿಗೆ ಕೋಳಿ ಹಂಚಿ ಜೊತೆ ತನ್ನ ಹುಟ್ಟುಹಬ್ಬವನ್ನ ಸಂಭ್ರಮದಿಂದ ಆಚರಿಸಿಕೊಂಡಿರುವ ಘಟನೆ ಸಕ್ಕರೆನಾಡು ಮಂಡ್ಯ ತಾಲೂಕಿನ ಬಸರಾಳು ಗ್ರಾಮದಲ್ಲಿ ನಡೆದಿದೆ.
ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಾನು ಜೆಡಿಎಸ್ ಅಭ್ಯರ್ಥಿಯಿಂದ ಹಣ ಪಡೆದಿರುವುದು ಸಾಬೀತು ಮಾಡಿದ್ರೆ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಕೆ.ಆರ್.ಪೇಟೆ ಶಾಸಕ ಹೆಚ್.ಟಿ.ಮಂಜು ಬಹಿರಂಗವಾಗಿ ವೇದಿಕೆಯಲ್ಲಿ ಸವಾಲು ಹಾಕಿದ್ದಾರೆ.
ಸಾಲಭಾದೆಗೆ ಬೇಸತ್ತ ರೈತ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾಮಲಿಂಗ (55) ಮೃತ ದುರ್ದೈವಿ.ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಕಾಳಕೆಂಪನದೊಡ್ಡಿ ಗ್ರಾಮದಲ್ಲಿ ಘಟನೆ ನಡೆದಿದೆ.
ಆಕಸ್ಮಿಕವಾಗಿ ವಿದ್ಯುತ್ ತಗುಲಿ ರೈತರೊಬ್ಬರು ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಸಾಗ್ಯ ಗ್ರಾಮದಲ್ಲಿ ನಡೆದಿದೆ.
ಕೆ.ಆರ್.ಎಸ್.ನಲ್ಲಿ ಮತ್ತೆ ಭದ್ರತಾ ಲೋಪದ ಕೂಗು ಕೇಳಿ ಬರುತ್ತಿದೆ.ಪದೇ ಪದೇ ಭದ್ರತಾ ಲೋಪವಾದರೂ ಸಂಬಧಪಟ್ಟವರು ಡೋಂಟ್ ಕೇರ್ ಎನ್ನುವಂತೆ ವರ್ತಿಸುತ್ತಿದ್ದಾರೆ.
ಪಾತ್ರೆ ತೊಳೆಯಲು ಹೋದ ಮೂವರು ವಿಧ್ಯಾರ್ಥಿಗಳು ನೀರುಪಾಲಾದ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕು ಮಹದೇವಪುರ ಸಮೀಪದ ಬೋರೆ ಗ್ರಾಮದ ಬಳಿ ಶನಿವಾರ ಸಂಜೆ ನಡೆದಿದೆ.
ಬಟ್ಟೆ ತೊಳೆಯುವಾಗ ಕಾಲು ಜಾರಿ ಬಿದ್ದ ಬಾಲಕಿ ರಕ್ಷಣೆಗೆ ಮುಂದಾಗಿ ನಾಲ್ವರು ಮಕ್ಕಳು ನೀರುಪಾಲಾದ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿಯಲ್ಲಿ ಟಿಪ್ಪರ್ ಲಾರಿ ಹಾಗೂ ಇನ್ನೋವಾ ಕಾರು ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಚಾಲಕ ಸಜೀವ ದಹನವಾಗಿರುವ ಘಟನೆ ನಡೆದಿದೆ.
ಕೆ.ಆರ್.ಸಾಗರ ಬೃಂದಾವನಕ್ಕೆ ಬಂದಿದ್ದ ಕೇರಳ ಮೂಲದ ಬಸ್ ಹಿಂಬದಿ ಚಲಿಸಿ ಕೇರಳ ಮೂಲದ ಮಹಿಳೆ ಸಾವನಪ್ಪಿರುವ ಘಟನೆ ಬೃಂದಾವನ ಬಸ್ ಪಾರ್ಕಿಂಗ್ ನಲ್ಲಿ ನಡೆದಿದೆ.
ಜಮೀನಿನಲ್ಲಿ ಉಳುಮೆ ಮಾಡುವ ವೇಳೆ ಹೃದಯಾಘಾತದಿಂದ ರೈತ ಸಾವನ್ನಪ್ಪಿದ ಘಟನೆ ಮಂಡ್ಯ ತಾಲ್ಲೂಕಿನ ಎಸ್.ಐ.ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೂರು ಕೆಎಸ್ ಆರ್ ಟಿ ಸಿ ಬಸ್ ಗಳ ನಡುವೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು 30 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಬಾಚನಹಳ್ಳಿ ಬಳಿ ನಡೆದಿದೆ.
ಗಣೇಶ ಮೆರವಣಿಗೆ ವೇಳೆ ಕಲ್ಲುತೂರಾಟ ಪ್ರಕರಣ ಖಂಡಿಸಿ ಇಂದು ಮದ್ದೂರು ಪ್ರವಾಸ ಕೈಗೊಂಡಿರುವ ಶ್ರೀರಾಮ ಸೇನೆ ಸಂಘಟನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್
ವಿದೇಶ ಪ್ರವಾಸ ಮುಗಿಸಿ ಬಂದ ಶಾಸಕ ಉದಯ್ ಮದ್ದೂರಿನ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಟಿ ನಡೆಸಿ ಸ್ಪಷ್ಟನೆ ನೀಡಿದರು. ಮಗಳ ವಿದ್ಯಾಭ್ಯಾಸದ ದೃಷ್ಟಿಯಿಂದ ನಾನು ವಿದೇಶಕ್ಕೆ ಹೋಗಿದ್ದೆ.