ಮಂಗಳೂರು : ಮೋಟಾರು ವಾಹನ ಚಾಲನೆ ಕಾಯ್ದೆ ಉಲ್ಲಂಘನೆಗೆ ಸಂಬಂಧಿಸಿ ಹಳೆ ಪ್ರಕರಣಗಳಲ್ಲಿ ಶೇ. 50ರಷ್ಟು ರಿಯಾಯಿತಿಯಡಿ ದಂಡ ಪಾವತಿಸಲು ಅವಕಾಶ ನೀಡಲಾಗಿದೆ.
ಇದರಡಿ ಆಗಸ್ಟ್ 23ರಿಂದ ಸೆ. 12ರ ಸಂಜೆಯವರೆಗೆ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 42600 ಮಂದಿ ದಂಡ ಪಾವತಿಸಿದ್ದಾರೆ. 1 ಕೋಟಿ 7 ಲಕ್ಷ ರೂ. ದಂಡ ಸಂಗ್ರಹವಾಗಿದೆ ಎಂದು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದರು.

