ಮಂಗಳೂರು: ಕುದ್ಮುಲ್ ರಂಗರಾವ್ ಪುರಭವನದಲ್ಲಿ ಎಂಪಿಎಂಎಲ್ಎ ನ್ಯೂಸ್ ವತಿಯಿಂದ 14ನೇ ವರ್ಷದ ಸೌಹಾರ್ದ ಸಂಗಮ ಕಾರ್ಯಕ್ರಮ ನವೆಂಬರ್ 24ರಂದು ಮಂಗಳವಾರ ಸಂಜೆ 4 ಗಂಟೆಯಿಂದ ನಡೆಯಲಿದೆ.
ಕಾರ್ಯಕ್ರಮದಲ್ಲಿ ಸಚಿವ ಯು.ಟಿ. ಖಾದರ್, ಶಾಸಕ ವೇದವ್ಯಾಸ ಕಾಮತ್ ಹಾಗೂ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಜನಸೇವಾ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರಿಗೆ ಸಮಾಜ ರತ್ನ ಪ್ರಶಸ್ತಿ, ರಾಜೇಶ್ ಶೆಟ್ಟಿ ಅವರಿಗೆ ಬೆಸ್ಟ್ ಆಫೀಸರ್ಸ್ ಅವಾರ್ಡ್ ಹಾಗೂ ಡಾ. ನೀನಾ ಎ. ಮಹಾಲೆ ಅವರಿಗೆ ಬೆಸ್ಟ್ ಡಾಕ್ಟರ್ಸ್ ಅವಾರ್ಡ್ ನೀಡಿ ಗೌರವಿಸಲಾಗುವುದು.
ಇದೇ ಸಂದರ್ಭದಲ್ಲಿ ರವೀಂದ್ರ ಪ್ರಭು ಬಳಗದ ರಾಗ್ ರಂಗ್ ತಂಡದಿಂದ ಸೌಹಾರ್ದ ಸಂಗೀತ ರಸಮಂಜರಿ ಹಾಗೂ ಸಂಜೆ 6 ಗಂಟೆಗೆ ನರೇಶ್ ಸಸಿಹಿತ್ತು ನಿರ್ದೇಶನದ ತ್ರಿನೇತ್ರ ಕಲಾವಿದರ ಜನಪ್ರಿಯ ತುಳು ನಾಟಕ ‘ಬ್ರಹ್ಮರಕ್ಕಸೆ’ ಉಚಿತವಾಗಿ ಪ್ರದರ್ಶನಗೊಳ್ಳಲಿದೆ. ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಉಚಿತ ಪ್ರವೇಶವಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘಟಕರಾದ ಅಶೋಕ್ ಶೆಟ್ಟಿ ಮನವಿ ಮಾಡಿದ್ದಾರೆ.

