ಮಂಗಳೂರು : “ಬಿಎಸ್ ವೈ ಅಭಿಮಾನೋತ್ಸವ’ ಮೇ 9ರಂದು ಚಿತ್ರದುರ್ಗದಲ್ಲಿ ನಡೆಯಲಿದ್ದು, ಜಿಲ್ಲೆಯಿಂದ 5 ಸಾವಿರ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಪರಿಷತ್‌ ಸದಸ್ಯ ಕಿಶೋರ್‌ಕುಮಾರ್‌ತಿಳಿಸಿದರು.

ಬಿಜೆಪಿ ಜಿಲ್ಲಾ ಪ್ರ. ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಮಂಗಳೂರು ನಗರ ದಕ್ಷಿಣ ಮಂಡಲ ಅಧ್ಯಕ್ಷ ರಮೇಶ್ ಕಂಡೆಟ್ಟು, ಹಿಂದುಳಿದ ವರ್ಗಗಳ ಮೋರ್ಚಾ ದ.ಕ. ಜಿಲ್ಲಾಧ್ಯಕ್ಷ ಮಹೇಶ್ ಜೋಗಿ, ಯುವ ಮೋರ್ಚಾ ದ.ಕ. ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಸಂಜಯ ಪ್ರಭು, ವಸಂತ ಪೂಜಾರಿ ಉಪಸ್ಥಿತರಿದ್ದರು.