ಮಂಗಳೂರು : ಈ ಬಾರಿ ಪುತ್ತೂರಿನಲ್ಲಿ ಬಿಜೆಪಿ ಗೆಲುವು ಖಚಿತ ಎಂದು ಮಂಗಳೂರಿನಲ್ಲಿ ಅಶೋಕ್ ಹೇಳಿಕೆ ನೀಡಿದ್ದಾರೆ. ನಮ್ಮ ಪಕ್ಷದ ಅಧ್ಯಕ್ಷರು ಹಾಗೂ ಸಂಸದರು ಬಿಜೆಪಿ ಗೆಲುವಿಗೆ ಶ್ರಮಿಸಲಿದ್ದಾರೆ.

ಹಿಂದಿನ ಚುನಾವಣೆಯಲ್ಲಿ ಪಕ್ಷದೊಳಗೆ ಸಮನ್ವಯದ ಕೊರತೆಯಿಂದ ಹಿನ್ನಡೆಯಾಗಿತ್ತು. ಈ ಬಾರಿ ಅಂತಹ ಪರಿಸ್ಥಿತಿ ನಿರ್ಮಾಣವಾಗುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಪುತ್ತೂರಿನಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದರು.