ಬಂಟ್ವಾಳ: ವಿದ್ಯುತ್ ತಂತಿ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಗಡಿಯಾರ ಎಂಬಲ್ಲಿ ನಡೆದಿದೆ.

ನೇರಳಕಟ್ಟೆ ಸಮೀಪದ ಕೊಡಾಜೆ ನಿವಾಸಿ ಶಹೀರ್ ( 15) ಮೃತಪಟ್ಟ ಬಾಲಕ. ನೇರಳಕಟ್ಟೆ ಸಮೀಪದ ಗಣೇಶ ನಗರದ ಪ್ಲಾಟ್ ನಲ್ಲಿ ಬಾಡಿಗೆ ಮನೆಯಲ್ಲಿರುವ ಶರೀಫ್ ಅವರ ಪುತ್ರ ಶಹೀರ್ ಅವರು ಶಾಲೆಗೆ ರಜೆ ಯಾಗಿದ್ದರಿಂದ ಗಡಿಯಾರದಲ್ಲಿರುವ ಅಜ್ಜನ ಮನೆ ಆಟೋ ರಿಕ್ಷಾ ಚಾಲಕ ಪುತ್ತಾಕರ ಮನೆಯಲ್ಲಿದ್ದರು.

ಶಹೀರ್ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಈತ ಪುತ್ತೂರು ಮೌಂಟೇನ್ ವ್ಯೂ ಆಂಗ್ಲ ಮಾಧ್ಯಮ ಶಾಲೆಯ ಎಸ್.ಎಸ್.ಎಲ್.ಸಿ.ವಿದ್ಯಾರ್ಥಿಯಾಗಿದ್ದಾನೆ.

View this post on Instagram

A post shared by News Karnataka (@newskarnataka)