ಮಂಗಳೂರು: ಬೈಕ್ ಸವಾರನಿಗೆ ಡಿಕ್ಕಿ ಹೊಡೆಯಲು ಹೋಗಿ ಕಾರು ಚಾಲಕನೋರ್ವ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದು ಪರಾರಿಯಾಗಿರುವ ಘಟನೆ ಬಿಜೈ ಕಾಪಿಕಾಡಿನ 6ನೇ ಮುಖ್ಯ ರಸ್ತೆಯಲ್ಲಿ ಗುರುವಾರ ಸಂಭವಿಸಿದೆ. ಕಾರು ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಕಾರು ಗುದ್ದಿದ ರಭಸಕ್ಕೆ ಮಹಿಳೆ ಮೇಲಕ್ಕೆ ಎಸೆಯಲ್ಪಟ್ಟು ಕಾಂಪೌಂಡ್ ಮೇಲೆ ನೇತಾಡಿದ್ದು, ಘಟನೆಯಲ್ಲಿ ಮಹಿಳೆಯ ಕಾಲಿಗೆ ಗಂಭೀರ ಗಾಯವಾಗಿದೆ, ಆರೋಪಿ ಕಾರು ಚಾಲಕ ಸತೀಶ್ ವಿರುದ್ಧ ಹಿಟ್ ಅಂಡ್ ರನ್ ಕೇಸ್ ದಾಖಲಾಗಿದೆ.

