ಬೆಳ್ತಂಗಡಿ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ 2014 ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಕೇರಳದ ಕಣ್ಣೂರು ನಿವಾಸಿ ಡೆನ್ನಿ ಜೋಸೆಫ್ ಯಾನೆ ಅಂಟೋನಿ ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಆಗಸ್ಟ್ 29 ರಂದು ಬಂಧಿಸಿದ್ದಾರೆ.

ಬೆಳ್ತಂಗಡಿ ಠಾಣೆಯ ಕಾನ್ ಸ್ಟೆಬಲ್ ಗಳಾದ ಮುನಿಯ ನಾಯ್ಕ ಮತ್ತು ಮನು ನಾಯ್ಕ ಅವರು ಖಚಿತ ಮಾಹಿತಿ ಮೇರೆಗೆ ಕೇರಳದ ಕಣ್ಣೂರಿಗೆ ತೆರಳಿ ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.