ಕಾರ್ಕಳ: ಮುಂಡ್ಕೂರು ಗ್ರಾಮದ ಜಾರಿಗೆಕಟ್ಟೆ ಸಮೀಪ ಶಾಂಭವಿ ನದಿಯಲ್ಲಿ ಇಷಾನ್ ಪಾಷಾ (40) ಅವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ಮೂಲದ ಇಷಾನ್ ಪಾಷಾ ಮೇಸ್ತ್ರಿ ಕೆಲಸ ಮಾಡಿಕೊಂಡಿದ್ದರು. ಕೆಲವು ದಿನಗಳ ಹಿಂದೆ ಮನೆಯಿಂದ ಹೊರಟಿದ್ದ ಅವರು ಬಳಿಕ ನಾಪತ್ತೆಯಾಗಿದ್ದು ಈಗ ನದಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಕಾಲು ಜಾರಿ ಬಿದ್ದಿರಬಹುದೋ ಅಥವಾ ಆತ್ಮಹತ್ಯೆ ಮಾಡಿಕೊಂಡಿರಬಹುದೋ ಎಂಬ ಶಂಕೆ ವ್ಯಕ್ತವಾಗಿದ್ದು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

