ಬಂಟ್ವಾಳ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೆಲ್ಕಾರ್ ನಲ್ಲಿ ಸಂಚರಿಸುತ್ತಿದ್ದ ಲಾರಿಯೊಂದರಲ್ಲಿ ದಿಢೀ‌ರ್ ಬೆಂಕಿ ಹೊತ್ತಿಕೊಂಡು ವಸ್ತುಗಳೆಲ್ಲವೂ ಭಸ್ಮಗೊಂಡ ಘಟನೆ ಭಾನುವಾರ ಸಂಜೆ ನಡೆದಿದೆ.

ಮಂಗಳೂರಿನಿಂದ ಬೆಂಗಳೂರು ಕಡೆಗೆ ಗುಜರಿ ವಸ್ತುಗಳನ್ನು ಸಾಗಾಟ ಮಾಡುತ್ತಿದ್ದ ಲಾರಿಯೊಳಗೆ ಸಮಸ್ಯೆ ಉಂಟಾಗಿ ಬೆಂಕಿ ಹತ್ತಿಕೊಂಡಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ಲಾರಿಯೊಳಗಿದ್ದ ಗುಜರಿ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.

ಘಟನೆಯ ಸುದ್ದಿ ತಿಳಿಯುತ್ತಲೇ ಸ್ಥಳಕ್ಕೆ ದೌಡಾಯಿಸಿದ ಬಂಟ್ವಾಳ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿನಂದಿಸಿದ್ದಾರೆ. ಗುಜುರಿ ವಸ್ತುಗಳಲ್ಲಿದ್ದ ಬ್ಯಾಟರಿಯಿಂದ ಆಕಸ್ಮಿಕವಾಗಿ ಬೆಂಕಿ ಆವರಿಸಿರಬಹುದೆಂದು ಅಂದಾಜಿಸಲಾಗಿದೆ.