ಬಂಟ್ವಾಳ : ಬಿ.ಸಿ.ರೋಡ್ ಸರ್ಕಲ್ ಬಳಿ ಗುರುವಾರ ಸಂಜೆ ವೇಳೆ ಮತ್ತೊಂದು ಭೀಕರ ಅಪಘಾತ ಸಂಭವಿಸಿ ಇಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ನಡೆದಿದೆ
ಮೃತ ವ್ಯಕ್ತಿಯನ್ನು ಸ್ಕೂಟರ್ ಸಹ ಸವಾರ ಪಾಣೆಮಂಗಳೂರು ಸಮೀಪದ ಮರ್ದೋಳಿ ನಿವಾಸಿ ಯಶವಂತ್ ಕುಲಾಲ್ ಸ್ಕೂಟರ್ ಸವಾರ ದಯಾನಂದ ಕುಲಾಲ್ ಎಂದು ಗುರುತಿಸಲಾಗಿದೆ.
ಗುರುವಾರ ಸಂಜೆ ವೇಳೆಗೆ ಬಿ.ಸಿ.ರೋಡಿನ ಮುಖ್ಯ ವೃತ್ತದಲ್ಲಿ ಮಂಗಳೂರು ಕಡೆಯಿಂದ ಧರ್ಮಸ್ಥಳ ಕಡೆಗೆ ಸಂಚರಿಸುತ್ತಿದ್ದ ಸ್ಕೂಟರಿಗೆ ಕಲ್ಲಡ್ಕ ಕಡೆಯಿಂದ ಲೊರೆಟ್ಟೊ ಕಡೆಗೆ ಹೋಗುತ್ತಿದ್ದ ಟಿಪ್ಪರ್ ಲಾರಿ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಸ್ಕೂಟರ್ ಸವಾರರಿಬ್ಬರ ಮೇಲೆ ಟಿಪ್ಪರ್ ಲಾರಿ ಹರಿದು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

