ಮಂಗಳೂರು: ಗುರುನಗರ ನಿವಾಸಿಯಾದ ಮಹಿಳೆಯೊಬ್ಬರು ತಮ್ಮ ಮಗಳೊಂದಿಗೆ ಯೆಯ್ಯಾಡಿಯಲ್ಲಿರುವ ತಮ್ಮ ಅಂಗಡಿಯಿಂದ ಮನೆಯ ಕಡೆಗೆ ಶಂಕರಭವನ ಹೊಟೇಲ್ ಬಳಿಯ ಕೊಪ್ಪಳಕಾಡು ರಸ್ತೆಯಲ್ಲಿ ಡಿ.25 ರಂದು ಸಂಜೆ ಸುಮಾರು 6.30 ಗಂಟೆಗೆ ನಡೆದುಕೊಂಡು ಹೋಗುವಾಗ ಹಿಂದಿನಿಂದ ಬಂದ ಓರ್ವ ಅಪರಿಚಿತ ವ್ಯಕ್ತಿ ಏಕಾಏಕಿ ರತ್ನಾವತಿಯವರ ಕುತ್ತಿಗೆಯಲ್ಲಿದ್ದ 32 ಗ್ರಾಂ ತೂಕದ ಬೆಲೆ ಬಾಳುವ ಚಿನ್ನದ ಕರಿಮಣಿ ಸರವನ್ನು ಕಸಿದುಕೊಂಡು ಓಡಿ ಹೋಗಿರುತ್ತಾನೆ.
ಈ ಬಗ್ಗೆ ಅದೇ ದಿನ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಅಪರಾಧ ಕ್ರಮಾಂಕ: 128/2025 ಕಲಂ: 304(2) ಭಾರತೀಯ ನ್ಯಾಯ ಸಂಹಿತೆ-2023 ರಂತೆ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿರುತ್ತದೆ. ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಶ್ರೀ ಗವಿರಾಜ್ ಮತ್ತು ಶ್ರೀ ಅರುಣ್ ಕುಮಾರ್, ಪಿ.ಎಸ್.ಐ ರವರು, ಠಾಣೆಯ ಕ್ರೈಂ ಸಿಬ್ಬಂದಿಗಳು ಮತ್ತು ಎಸಿಪಿ ದಕ್ಷಿಣ ಉಪವಿಭಾಗದ ಕ್ರೈಂ ಸಿಬ್ಬಂದಿಗಳು ಸೇರಿ ಆರೋಪಿಯ ಪತ್ತೆ ಕಾರ್ಯವನ್ನು ನಡೆಸಿದ್ದಾರೆ.
ಸಾಕ್ಷ್ಯಾಧಾರಗಳ ಮೇಲೆ ಡಿ.28 ರಂದು ಬೆಳಿಗ್ಗೆ ಸುಮಾರು 9.30 ಗಂಟೆಗೆ ಪ್ರಕರಣದ ಆರೋಪಿ ರೋಹಿತ್ .ಬಿ ದಾಸ್ ಎಂಬಾತನನ್ನು ಬಂಟ್ವಾಳದ ಕುಕ್ಕೆಪದವು ಎಂಬಲ್ಲಿ ದಸ್ತಗಿರಿ ಮಾಡಿ, ಸುಲಿಗೆ ಮಾಡಿದ 32 ಗ್ರಾಂ ಚಿನ್ನದ ಕರಿಮಣಿ ಸರ ಮೌಲ್ಯ ರೂ.3,50,000/- ಮತ್ತು ಕೃತ್ಯಕ್ಕೆ ಉಪಯೋಗಿಸಿದ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ವಶಪಡಿಸಿಕೊಂಡಿರುತ್ತಾರೆ.
ತನಿಖೆಯಲ್ಲಿ ಆರೋಪಿಯು ಸ್ವಿಗ್ಗಿ ಮತ್ತು ಝೋಮೆಟೋ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ಇತ್ತೀಚೆಗೆ ಸ್ಕೂಟರ್ ಖರೀದಿಸಿದ್ದು, ಮತ್ತು ಇತರ ವಿಚಾರಗಳಿಗೆ ಲಕ್ಷಾಂತರ ರೂಪಾಯಿಗಳ ಸಾಲ ಮಾಡಿದ್ದು, ಸಾಲವನ್ನು ತೀರಿಸಲು ಈ ಕೃತ್ಯವನ್ನು ಎಸಗಿರುವುದು ಈವರೆಗಿನ ತನಿಖೆಯಲ್ಲಿ ತಿಳಿದು ಬಂದಿರುತ್ತದೆ.
ರೋಹಿತ್ .ಬಿ ದಾಸ್ ಬಂಧಿತ ಆರೋಪಿ 24 ವರ್ಷ, ತಂದೆ ಲಕ್ಷ್ಮಣ ದಾಸ್ ಡೋರ್ ನಂ 1-13/1, ಬಿತ್ತ ಮನೆ, ಪಂಚದುರ್ಗ ಪ್ರೌಢಶಾಲೆಯ ಹಿಂಭಾಗ, ಕಕ್ಕೆಪದವು, ಉಳಿಗ್ರಾಮ ಮತ್ತು ಅಂಚೆ, ಬಂಟ್ವಾಳ ತಾಲೂಕು, ದಕ್ಷಿಣ ಕನ್ನಡ ಜಿಲ್ಲೆ. 2025 ನೇ ಸಾಲಿನಲ್ಲಿ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ 07 ಸರಗಳ್ಳತನ (ಚೈನ್‌ಸ್ಟಾಚಿಂಗ್) ಪ್ರಕರಣಗಳು ವರದಿಯಾಗಿದ್ದು, ಎಲ್ಲಾ 07 ಪ್ರಕರಣಗಳನ್ನು ಭೇದಿಸಿ ಆರೋಪಿಗಳನ್ನು ಬಂಧಿಸಿ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿರುತ್ತದ

