ಮಂಗಳೂರು : ಧರ್ಮಸ್ಥಳ ಪಾಂಗಳ ಕ್ರಾಸ್ ಬಳಿ ಅಗಸ್ಟ್‌ 06 ರಂದು ನಡೆದ ಅಹಿತಕರ ಘಟನೆಯ ವೇಳೆ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ:47/2025 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿದೆ.

ಧರ್ಮಸ್ಥಳ ನಿವಾಸಿಗಳಾದ ಪದ್ಮಪ್ರಸಾದ್ (32), ಸುಹಾಸ್ (22) ಉಜಿರೆ ನಿವಾಸಿ ಖಲಂದರ್ ಪುತ್ತುಮೋನು (42), ಕಳೆಂಜ ನಿವಾಸಿ ಚೇತನ್ (21), ಧರ್ಮಸ್ಥಳ ನಿವಾಸಿ ಶಶಿಧರ್(30), ಕಳ್ಮಂಜ ನಿವಾಸಿ ಗುರುಪ್ರಸಾದ್ (19) ಎಂಬವರುಗಳನ್ನು ದಸ್ತಗಿರಿ ಮಾಡಿ ಅಗಸ್ಟ್‌ 09 ರಂದು ಮಾನ್ಯ ನ್ಯಾಯಾಲಯಕ್ಕೆ ಹಾಜರಾಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗಳಿಗೆ ಮಧ್ಯಂತರ ಜಾಮೀನು ನೀಡಿ ಬಿಡುಗಡೆಗೊಳಿಸಿರುತ್ತದೆ. ಎಂದು ಪೊಲೀಸ್ ಬಲ್ಲ ಮೂಲಗಳಿಂದ ತಿಳಿಸಿದ್ದಾರೆ.