ದಕ್ಷಿಣ ಕನ್ನಡ : ಪೋಕ್ಸೋ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ನಗರ ಪೊಲೀಸ್ ಠಾಣಾ ಅ.ಕ್ರ: 53/2018, ಕಲಂ 448, 506, 354 ಐಪಿಸಿ & ಕಲಂ 12 ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಪುತ್ತೂರು ನರಿಮೊಗರು ನಿವಾಸಿ ನಮನ್ ನಾಯಕ್ (32) ಎಂಬಾತನನ್ನು ಪುತ್ತೂರು ನಗರ ಪೊಲೀಸರು ಬೆಂಗಳೂರಿನ ಕೂಡ್ಲುಪೇಟೆ ಎಂಬಲ್ಲಿ ವಶಕ್ಕೆ ಪಡೆದಿದ್ದಾರೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

