ಮಂಗಳೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಆರ್ ಎಸ್ ಎಸ್ ವಿರುದ್ದ ನಿರಂತರ ವಾಗ್ದಾಳಿ ವಿಚಾರವಾಗಿ ವಿಶ್ವ ಹಿಂದೂ ಪರಿಷತ್ತಿನ ಅಂತರರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಹೇಳಿಕೆ ನೀಡಿದರು.

ಆರೆಸ್ಸೆಸ್ ಖಾತೆಗಳ ಲೆಕ್ಕಪತ್ರ ಕೇಳುತ್ತಿರುವ ವಿಪಕ್ಷಗಳ ನಾಯಕರ ಹೇಳಿಕೆಗೆ ತಿರುಗೇಟು ನೀಡಿದರು. ದೇಶದಲ್ಲಿ ವಾಕ್ ಸ್ವಾತಂತ್ರ್ಯ ವಿರುವ ಕಾರಣ ಮಾತನಾಡುತ್ತಿದ್ದಾರೆ ಅದರಲ್ಲಿ ತಪ್ಪಿಲ್ಲ. ತಮ್ಮ ಹೇಳಿಕೆಗಳ ಮೂಲಕ ಅಲ್ಪ ಸಂಖ್ಯಾತರನ್ನು ಮೆಚ್ಚಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು.

ಆರ್ ಎಸ್ಎಸ್ ನ ಗುರುದಕ್ಷಿಣೆಯು ಸ್ವಯಂಸೇವಕರು ನೀಡುವ ಪವಿತ್ರ ಸಂಭಾವನೆಯಾಗಿದೆ. ಇದು ಯಾವುದೇ ಸಾರ್ವಜನಿಕ ದೇಣಿಗೆಯಲ್ಲ. ಬಿಹಾರ್ ಹೈಕೋರ್ಟ್ ಮತ್ತು ಆದಾಯ ತೆರಿಗೆ ಇಲಾಖೆಯ ತೀರ್ಪುಗಳ ಪ್ರಕಾರ ಇದು ತೆರಿಗೆ ವ್ಯಾಪ್ತಿಗೆ ಬರುವುದಿಲ್ಲ. ಎಲ್ಲ ವಿಚಾರಗಳು ಸ್ಪಷ್ಟವಾಗಿರುವಾಗ ಕರ್ನಾಟಕದ ಗೃಹ ಸಚಿವರ ಹೇಳಿಕೆ ಹಾಸ್ಯಾಸ್ಪದ ಎಂದರು.