ಮಂಗಳೂರು: ರಾಷ್ಟ್ರೀಯ ಹೆದ್ದಾರಿಯ ಸುರತ್ಕಲ್-ಬಿ.ಸಿ.ರೋಡು ನಡುವಿನ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಕೇಂದ್ರದಿಂದ ಅನುಮೋದನೆ ಸಿಕ್ಕಿದೆ. ಅದಕ್ಕೆ ಸಂಬಂಧಿಸಿದಂತೆ ಯೋಜನಾ ವರದಿ (ಡಿಪಿಆರ್) ಸಿದ್ದಗೊಳಿಸಲಾ ಗುತ್ತಿದೆ ಎಂದು ಸಂಸದ ಬ್ರಿಜೇಶ್ ಚೌಟ ಹೇಳಿದರು.

ನಗರದ ಸರ್ಕ್ಯೂಟ್‌ ಹೌಸ್‌ನಲ್ಲಿ ಗುರುವಾರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು. ಸುರತ್ಕಲ್-ಬಿ.ಸಿ.ರೋಡು ಹೆದ್ದಾರಿ ಸಮಸ್ಯೆಯಿಂದ ಕೂಡಿದೆ. ಅವುಗಳ ನಿವಾರಣೆಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಪೊಲೀಸ್‌ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಂಘಟಿತವಾಗಿ ಕೆಲಸ ಮಾಡಬೇಕು. ಬ್ಲಾಕ್ ಸ್ಪಾಟ್‌ಗಳನ್ನು ಗುರುತಿಸಿ,

ಸರ್ವಿಸ್ ರಸ್ತೆ, ಚರಂಡಿ ವ್ಯವಸ್ಥೆಗಳ ಬಗ್ಗೆ ಮೂರು ಇಲಾಖೆಗಳು ಚರ್ಚೆ ನಡೆಸಿ ಸಮರ್ಪ ಕವಾಗಿ ಯೋಜನಾ ವರದಿ ಸಿದ್ಧಪಡಿಸಬೇಕು. ಅಗತ್ಯ ಇರುವಲ್ಲಿ ಕಾಂಕ್ರಿಟ್ ರಸ್ತೆ ನಿರ್ಮಾಣ, ಜಂಕ್ಷನ್‌ಗಳ ಅಭಿವೃದ್ಧಿ ಹೆದ್ದಾರಿ ಸಂಪರ್ಕಿಸುವ ರಸ್ತೆಗಳ ಅಭಿವೃದ್ಧಿಗೆ ಕ್ರಮ ವಹಿಸಬೇಕು. ಹೆದ್ದಾರಿ ಪ್ರಾಧಿಕಾರ ತ್ವರಿತಗತಿಯಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲು ಕ್ರಮವಹಿಸಬೇಕು ಎಂದರು.