ಮಂಗಳೂರು : ಉಪರಾಷ್ಟ್ರಪತಿ ಜಗದೀಶ್ ಧನ್ ಕರ್ ಅವರು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಆಗಮಿಸಿದರು. ರಾಜ್ಯ ಸರಕಾರದ ಪರವಾಗಿ ಉನ್ನತ ಶಿಕ್ಷಣ ಸಚಿವ ಎಂ. ಸಿ. ಸುಧಾಕರ್ ಅವರು ಉಪರಾಷ್ಟ್ರಪತಿಗಳನ್ನು ಸ್ವಾಗತಿಸಿದರು.

ಇದೇ ಸಂದರ್ಭದಲ್ಲಿ ಉಪ ರಾಷ್ಟ್ರ ಪತಿ ಧನ ಕರ್ ಅವರು ತನ್ನ ಪತ್ನಿಯನ್ನು ಹತ್ತಿರಕ್ಕೆ ಕರೆದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರನ್ನು ಪರಿಚಯಿಸಿ ಮುಂದಕ್ಕೆ ಧರ್ಮಸ್ಥಳಕ್ಕೆ ಹೋಗುವಾಗಲೂ ಚೌಟ ಅವರನ್ನು ತಮ್ಮ ಹೆಲಿಕಾಪ್ಟರ್ ನಲ್ಲಿ ಬರುವಂತೆ ಕೈ ಹಿಡಿದು ಹೆಲಿಕಾಪ್ಟರ್ ಹತ್ತುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ದ.ಕ. ಜಿಲ್ಲಾಧಿಕಾರಿ ಮುಲ್ಲೈ. ಮುಹಿಲನ್, ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್ ಉಪಸ್ಥಿತರಿದ್ದರು. ಬಳಿಕ ಉಪರಾಷ್ಟ್ರಪತಿ ಧಮ೯ಸ್ಥಳಕ್ಕೆ ಹೆಲಿಕಾಪ್ಟರ್ ನಲ್ಲಿ ತೆರಳಿದರು.

