ಮಂಗಳೂರು: ಎಸ್‌ಐಟಿಯಿಂದ ಪ್ರಸಕ್ತ ನಡೆಯುತ್ತಿರುವ ತನಿಖೆಯ ಬಗ್ಗೆ ವಿಶ್ವಾಸ ಇಲ್ಲದೆ ಎನ್‌ಐಎಗೆ ತನಿಖೆಗೆ ಬಿಜೆಪಿ ಒತ್ತಾಯಿಸುತ್ತಿದೆಯೇ ಎಂಬ ಪ್ರಶ್ನೆಗೆ, ಎಸ್‌ಐಟಿ ತನಿಖೆ ಮೇಲೆ ಯಾವುದೇ ಆಕ್ಷೇಪವಿಲ್ಲ.

ಆದರೆ ಧರ್ಮಸ್ಥಳ ಕ್ಷೇತ್ರದ ಬಗ್ಗೆ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ಅದಕ್ಕೆ ಸಾಕಷ್ಟು ಮಂದಿ ಪ್ರಾಯೋಜಕತ್ವ ನೀಡಿದ್ದಾರೆ. ಹಣದ ವ್ಯವಹಾರ ನಡೆದಿದೆ. ಆರ್ಟಿಫಿಶಿಯಲ್ ಇಂಟೆಲೆಜೆನ್ಸಿ ವೀಡಿಯೋ ಮಾಡಿ ಹಂಚಲು ಹಣದ ಅಗತ್ಯವಿದೆ. ಈ ಬಗ್ಗೆ ತನಿಖೆ ಆಗಬೇಕು ಎಂದು ಶಾಸಕ ಡಾ. ಭರತ್ ಶೆಟ್ಟಿ ಹೇಳಿದರು.

ಹಣದ ವ್ಯವಹಾರದ ಬಗ್ಗೆ ಅಥವಾ ಎಷ್ಟು ಹಣದ ವ್ಯವಹಾರ ನಡೆದಿದೆ ಎಂಬ ಬಗ್ಗೆ ದಾಖಲೆ ಇದೆಯೇ ಎಂಬ ಪ್ರಶ್ನೆಗೆ, ಆ ಬಗ್ಗೆ ಅನುಮಾನವಿದೆ, ತನಿಖೆಯಾಗಲಿ ಎಂದವರು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಸಂಜಯ್ ಪ್ರಭು, ಪ್ರೇಮಾನಂದ ಶೆಟ್ಟಿ, ವಸಂತ ಜೆ. ಪೂಜಾರಿ ಉಪಸ್ಥಿತರಿದ್ದರು.