ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ಸಹಭಾಗಿತ್ವದಲ್ಲಿ ಆ.4 ರಂದು ಆಟಿದ ಗೇನ ಕಾರ್ಯಕ್ರಮ ಉರ್ವಾಸ್ಟೋರ್ ನ ತುಳು ಭವನದಲ್ಲಿ ನಡೆಯಲಿದೆ.
ಹಿಂದಿನ ಕಾಲದ ಆಟಿ ತಿಂಗಳ ಜನ ಜೀವನದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವ ಕಾರ್ಯಗಾರ ಹಾಗೂ ಆಟಿಯ ಕುರಿತಾಗಿ ಚಿತ್ರಕಲಾ ಸ್ಪರ್ಧೆಯು ಆಟಿದ ಗೇನ ಕಾರ್ಯಕ್ರಮದಲ್ಲಿ ನಡೆಯಲಿದೆ.
ಬೆಳಿಗ್ಗೆ 11.30ಕ್ಕೆ ನಡೆಯುವ ಸಭಾ ಕಾರ್ಯಕ್ರಮವನ್ನು ಉರ್ವಾ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಶ್ರೀಮತಿ ಭಾರತಿ. ಜಿ ಅವರು ಉದ್ಘಾಟಿಸುವರು. ಹಿರಿಯ ಸಂಶೋಧಕಿ , ತುಳು ವಿದ್ವಾಂಸರಾದ ಡಾ.ಇಂದಿರಾ ಹೆಗ್ಡೆ ಅವರು ಆಟಿಯ ಬಗ್ಗೆ ಉಪನ್ಯಾಸ ನೀಡುವರು. ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅಧ್ಯಕ್ಷತೆ ವಹಿಸುವರು.ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಎ.ಖಾದರ್ ಷಾ ಅವರು ವಿಶೇಷ ಅತಿಥಿಯಾಗಿ ಭಾಗವಹಿಸುವರು.
ಸಭಾ ಕಾರ್ಯಕ್ರಮಕ್ಕೆ ಮೊದಲು ಬೆಳಿಗ್ಗೆ 9.30 ರಿಂದ ವಿದ್ಯಾರ್ಥಿಗಳಿಗೆ ಆಟಿಯ ಬದುಕಿನ ಬಗ್ಗೆ ಚಿತ್ರಕಲಾ ಸ್ಪರ್ಧೆ ನಡೆಯಲಿದೆ ಎಂದು ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ಅಧ್ಯಕ್ಷ ರವಿ ಕುದ್ಮುಲ್ ಗಾರ್ಡನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

