ಮಂಗಳೂರು : ವಿಶ್ವ ಆಟಿಸಂ ದಿನದ ಹಿನ್ನೆಲೆಯಲ್ಲಿ ಮಂಗಳೂರಿನ ಶಕ್ತಿನಗರದಲ್ಲಿರುವ ಸಾನಿಧ್ಯ ಭಿನ್ನ ಸಾಮರ್ಥ್ಯದ ಮಕ್ಕಳ ವಸತಿ ಶಾಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಒಂದು ದಿನದ ಆಟಿಸಂ ಬಗ್ಗೆ ಮಾಹಿತಿ ಶಿಬಿರವನ್ನು ಏರ್ಪಡಿಸಲಾಗಿತ್ತು.

ದ.ಕ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರಾದ ಉಸ್ಮಾನ್ ಎ. ಅವರು ಕಾರ್ಯಕ್ರಮ ಉದ್ಘಾಟಿಸಿದರು. ಸಾನಿಧ್ಯ ಶಾಲೆಯ ಆಡಳಿತಾಧಿಕಾರಿ ಡಾ. ವಸಂತ್ ಕುಮಾರ್ ಶೆಟ್ಟಿ, ವಿಶೇಷ ಶಿಕ್ಷಕಿ ಸೋಫಿಯಾ ಡಿ’ಸೋಜಾ ಹಾಗೂ ಪ್ರಾಂಶುಪಾಲೆ ಮೀನಾಕ್ಷಿ ಎಂ. ಕೆ. ಅವರು ಆಟಿಸಂ ಬಗ್ಗೆ ಮಾಹಿತಿ ನೀಡಿದರು.

View this post on Instagram

A post shared by News Karnataka (@newskarnataka)