ಮಂಗಳೂರು : ಎಲೆಕ್ಟ್ರಿಕಲ್ ಆಟೋ ರಿಕ್ಷಾಗಳಿಗೆ ಜಿಲ್ಲೆಯಾದ್ಯಂತ ಸಂಚರಿಸಲು ಜಿಲ್ಲಾಡಳಿತ ಅವಕಾಶ ನೀಡಿರುವುದನ್ನು ವಿರೋಧಿಸಿ ಇತರ ಆಟೋ ರಿಕ್ಷಾ ಚಾಲಕ ಮಾಲೀಕರ ಸಂಘಗಳ ಒಕ್ಕೂಟದ ನೇತೃತ್ವದಲ್ಲಿ ಆಟೊರಿಕ್ಷಾ ಚಾಲಕರು ಪ್ರತಿಭಟನೆ‌ ನಡೆಸಿದರು. ನಗರದ ಜ್ಯೋತಿ ಸರ್ಕಲ್‌ನಿಂದ ಮೆರವಣಿಗೆ ಆರಂಭಿಸಿದ ಆಟೋ ರಿಕ್ಷಾ ಚಾಲಕರು, ಕ್ಲಾಕ್ ಟವರ್ ವರೆಗೆ ಮೆರವಣಿಗೆ‌ ನಡೆಸಿದರುದಕ್ಷಿಣ ಕನ್ನಡ ಜಿಲ್ಲಾ ಆಟೋ ರಿಕ್ಷಾ ಚಾಲಕರ ಮಾಲಕರ ಸಂಘಗಳ ಒಕ್ಕೂಟ ಮತ್ತು ಸಮಾನ ಮನಸ್ಕ ಆಟೋರಿಕ್ಷಾ ಚಾಲಕರ ಮಾಲಕರ ಸಂಘಟನೆಗಳ ನೇತೃತ್ವದಲ್ಲಿ ನಗರದ ಅಂಬೇಡ್ಕರ್ ವೃತ್ತದಿಂದ ಕ್ಲಾಕ್ ಟವರವರೆಗೆ ಮೆರವಣಿಗೆ ಮೂಲಕ ಸಾವಿರವರು ಆಟೋ ಚಾಲಕರು ಮಾಲಕರು ಮೆರವಣಿಗೆ ಮೂಲಕ ಬಂದು , ಸ್ಥಳಕ್ಕೆ ಜಿಲ್ಲಾಧಿಕಾರಿ ಆಗಮಿಸಿ ಮನವಿ ಸ್ವೀಕರಿಸಲು ಒತ್ತಾಯಿಸಿ ಪ್ರತಿಭಟನೆ ನಡೆಸಿದರು