ಮಂಗಳೂರು:  ದೇಶದ ಜನರನ್ನು ಬೆಚ್ಚಿ ಬೀಳಿಸಿದ ಮಂಗಳೂರು ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ವಿಮಾನ ದುರಂತ ಸಂಭವಿಸಿ ಇದೀಗ 14 ವರ್ಷ ತುಂಬುತ್ತಿದೆ. ವಿಮಾನ ದುರಂತದಲ್ಲಿ ಮೃತಪಟ್ಟವರಲ್ಲಿ ಹಲವರ ಮೃತದೇಹದ ಗುರುತು ಪತ್ತೆಯಾಗದೆ ಉಳಿದಿದ್ದು, ಅವುಗಳನ್ನು ಕೂಳೂರಿನ ಫಲ್ಗುಣಿ ನದಿ ಕಿನಾರೆಯಲ್ಲಿ ದಫನ ಮಾಡಲಾಗಿತ್ತು. ಅದೇ ಜಾಗದಲ್ಲಿ ಸಂತ್ರಸ್ತರ ನೆನಪಿನ ಪಾರ್ಕ್‌ ನಿರ್ಮಿಸಲಾಗಿದೆ.ಇಂದು ಬೆಳಗ್ಗೆ 9.30 ಗಂಟೆಗೆ ಜಿಲ್ಲಾಡಳಿತ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ನೇತೃತ್ವದಲ್ಲಿ ಪುಷ್ಪ ಗುಚ್ಛ ಇರಿಸಿ ಶ್ರದ್ಧಾಂಜಲಿ ಸಲ್ಲಿಸಿದರು.

2010ರ ಮೇ 22ರಂದು ಬೆಳಗ್ಗೆ 6.20ಕ್ಕೆ ದುಬಾೖಯಿಂದ ಬಂದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ಲ್ಯಾಂಡ್‌ ಆಗುವ ಹಂತದಲ್ಲಿ ಚಾಲಕನ ಲೆಕ್ಕಾಚಾರ ತಪ್ಪಿ ಮಿತಿಗಿಂತ ಸ್ವಲ್ಪ ಮೀಟರ್‌ ದೂರದಲ್ಲಿ ಇಳಿದ ಕಾರಣ ಹತೋಟಿ ತಪ್ಪಿ ಟರ್ಮಿನಲ್ ಬಳಿ ಆವರಣ ಗೋಡೆಗೆ ರೆಕ್ಕೆ ಬಡಿದು ಬೆಂಕಿ ಹತ್ತಿಕೊಂಡು ಕೆಂಜಾರಿನ ಕಡಿದಾದ ಗುಡ್ಡದಿಂದ ಕೆಳಗೆ ಉರುಳಿತ್ತು ಬೆಂಕಿ ಹತ್ತಿ ಕೊಂಡ ವಿಮಾನದಲ್ಲಿ ಪೈಲಟ್, ಸಿಬ್ಬಂದಿ ಸಹಿತ 158 ಮಂದಿ ಮೃತರಾಗಿದ್ದರು.ಈ ಪೈಕಿ 19 ಮಕ್ಕಳು ಹಾಗೂ 6 ಮಂದಿ ಶಿಶುಗಳು, 6 ವಿಮಾನ ಸಿಬ್ಬಂದಿ ಸೇರಿ 166 ಮಂದಿ ಪ್ರಯಾಣಿಸುತ್ತಿದ್ದರು.ಅಪಘಾತದಲ್ಲಿ ಬದುಕುಳಿದವರು 8ಮಂದಿ ಮಾತ್ರ.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ , ಮಂಗ ಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್,ಸಂತ್ರಸ್ತರ ಕುಟುಂಬದ ಸದಸ್ಯರಾದ ಶೊಭಾ ಶೆಟ್ಟಿ, ಶ್ರೇಯ ಮೊದಲಾದವರು ಉಪಸ್ಥಿತರಿದ್ದರು.