ಮಂಗಳೂರು : ಭಜರಂಗದಳ ಮುಖಂಡ ಪುನೀತ್ ಅತ್ತಾವರಗೆ 3 ತಿಂಗಳಕಾಲ ಉಡುಪಿ ಜಿಲ್ಲೆಗೆ ಪ್ರವೇಶ ನಿರ್ಬಂಧ ಹೇರಲಾಗಿದೆ.
ಅ.14 ರಿಂದ ನ. 13 ರವರಗೆ 03 ತಿಂಗಳ ಕಾಲ ನಿರ್ಬಂಧ ಹೇರಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತ 2023 ರ ಕಲಂ ೧೬೩ ಅಡಿಯಲ್ಲಿ ನಿರ್ಬಂಧ ವಿಧಿಸಲಾಗಿದೆ.
ಸ್ವಾತಂತ್ರ್ಯ ದಿನದಂದು ಉಡುಪಿಯಲ್ಲಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗ್ಗಿದ್ದ ಪುನೀತ್ ಅತ್ತಾವರ್ ದಿಕ್ಷುಚಿ ಭಾಷಣ ಮಾಡಲಿದ್ದಾರೆ. ಉಡುಪಿ ಪೊಲೀಸರು ಪುನೀತ್ ಅತ್ತಾವರಗೆ ನೋಟೀಸ್ ನೀಡಿದ್ದಾರೆ.

