ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು ಹೋಗಿದ್ದಾರೆ.

ಇಂದು ಬೆಳಗ್ಗೆ 7.45ರ ಸುಮಾರಿಗೆ ಘಟನೆ ನಡೆದಿದ್ದು, ಡಿವೈಡರ್ ಮೇಲೆ ಅಳವಡಿಸಿದ್ದ ರಸ್ತೆ ಸೂಚನಾ ಫಲಕಕ್ಕೆ ಹಾನಿಯಾಗಿರುವುದು ಬಿಟ್ಟರೆ ಉಳಿದಂತೆ ಯಾವುದೇ ಹಾನಿ ಉಂಟಾಗಿಲ್ಲ.‌
ಲಾರಿಯು ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ  ಚಲಿಸುತ್ತಿತ್ತು‌ ಎನ್ನಲಾಗಿದೆ.