ಬೆಳ್ತಂಗಡಿ: ಮನೆಯ ಅಂಗಳದಲ್ಲಿಯೇ  ಮಾರಕಾಸ್ತ್ರದಿಂದ ಕೊಚ್ಚಿ ನಿವೃತ್ತ ಶಿಕ್ಷಕನ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಎಸ್.ಪಿ.ಬಿ ಕಾಂಪೌಂಡಿನಲ್ಲಿ ನಡೆದಿದೆ. ಎಸ್.ಪಿ.ಬಾಲಕೃಷ್ಣ ಭಟ್ (73) ಕೊಲೆಯಾದ ವ್ಯಕ್ತಿ.
ಮಂಗಳವಾರ ಮಧ್ಯಾಹ್ನದ ಬಳಿಕ ಘಟನೆ ಸಂಭವಿಸಿದೆ. ಕೊಲೆಗಾರರು ಯಾರು ? ಕೊಲೆಗೆ ಕಾರಣವೇನು ಎಂಬ ಬಗ್ಗೆ ಸ್ಪಷ್ಟವಾದ ಮಾಹಿತಿಗಳು ಲಭ್ಯವಾಗಿಲ್ಲ. ಈ ಬಗ್ಗೆ ಇನ್ನಷ್ಟೇ ಮಾಹಿತಿ ತಿಳಿದು ಬರಬೇಕಿದೆ. ಸ್ಥಳಕ್ಕೆ ಧರ್ಮಸ್ಥಳ ಠಾಣೆ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.