ಮಂಗಳೂರು: ನಗರದಲ್ಲಿ ಹೈಡ್ರೊವಿಡ್ ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ಬಿಸಿಎ ವಿದ್ಯಾರ್ಥಿನಿಯನ್ನು ಅರೆಸ್ಟ್ ಮಾಡಲಾಗಿದೆ. ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರ ನಿವಾಸಿ ಸುಹಾನ(21) ಬಂಧಿತೆ ಆರೋಪಿ.
ಕುಂದಾಪುರದ ಖಾಸಗಿ ಕಾಲೇಜೊಂದರಲ್ಲಿ ಅಂತಿಮ ವರ್ಷದ ಬಿಸಿಎ ವ್ಯಾಸಂಗವನ್ನು ವಿದ್ಯಾರ್ಥಿನಿ ಸುಹಾನಾ ಮಾಡುತ್ತಿದ್ದರು. ಆರೋಪಿಯಿಂದ 1.42 ಕೆಜಿ ಹೈಡ್ರೊವಿಡ್ ಗಾಂಜಾ ವಶಕ್ಕೆ ಪಡೆಯಲಾಗಿದೆ. ವಶಪಡಿಸಿಕೊಂಡ ಗಾಂಜಾದ ಮೌಲ್ಯ ಸುಮಾರು 35 ಲಕ್ಷ ಅಂದಾಜಿಸಲಾಗಿದೆ.
ಗಾಂಜಾವನ್ನು ಮಾರಾಟಕ್ಕೆ ಸಾಗಿಸುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಲಾಯಿತು. ಮುಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ಪಣಂಬೂರು ಎಸಿಪಿ ತಂಡ ಹಾಗೂ ಮುಲ್ಕಿ ಪೊಲೀಸರು ದಾಳಿ ಮಾಡಿದರು. ಆರೋಪಿಯಿಂದ ಮೊಬೈಲ್ ಫೋನ್ ಹಾಗೂ ಇತರ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಚೆನ್ನೈನಿಂದ ಗಾಂಜಾ ತಂದು ಮಂಗಳೂರಿನಲ್ಲಿ ಯುವತಿ ಮಾರಾಟ ಮಾಡುತ್ತಿದ್ದರು. ಮುಲ್ಕಿ ಪೊಲೀಸ್ ಠಾಣೆಯಲ್ಲಿ NDPS ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ. ಆರೋಪಿತೆಯ ವಿರುದ್ಧ ಈಗಾಗಲೇ ಕಾವೂರು ಠಾಣೆ ಹಾಗೂ ಬೆಂಗಳೂರು ಏರ್‌ಪೋರ್ಟ್ ಕಸ್ಟಮ್ಸ್‌ನಲ್ಲಿ ಪ್ರಕರಣ ದಾಖಲಾಗಿತ್ತು.

