ಮಂಗಳೂರು : ರಾಜ್ಯ ಕಾಂಗ್ರೆಸ್ ಸರಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ 399 ಗ್ರಾಮ ಪಂಚಾಯತ್ ಕಛೇರಿಗಳ ಎದುರು ಏಕಕಾಲದಲ್ಲಿ ಪ್ರತಿಭಟನೆ ನಡೆಯಿತು.

ಇದರ ಹಿನ್ನೆಲೆ ಮಂಗಳೂರು ಮಹಾ ನಗರ ಪಾಲಿಕೆಯ ಕಚೇರಿ ಮುಂಭಾಗವೂ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ವಿಕಾಸ್ ಮತ್ತು ಶಾಸಕ ವೇದವ್ಯಾಸ್ ಕಾಮತ್ ಸರಕಾರದ ವೈಫಲ್ಯವನ್ನ ಪ್ರತಿಭಟನೆಯಲ್ಲಿ ಕಿಡಿಕಾರಿದರು. ನೆರೆದವರು ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.