ಮಂಗಳೂರು: ಮೀನುಗಾರಿಕಾ ಬಂದರ್ ಬಳಿ ನದಿಯಲ್ಲಿ ಶವ ಪತ್ತೆಯಾಗಿದೆ. ಕೊಲೆ ಮಾಡಿ ನದಿಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ. ನಾಸೀರ್ ಯಾನೆ ದಕ್ಕೆ ನಾಸಿರ್ ಕೊಲೆಯಾದ ವ್ಯಕ್ತಿ ಎಂಬ ಮಾಹಿತಿ ತಿಳಿದು ಬಂದಿದೆ.
ಹಲವಾರು ಕಳ್ಳತನ ದರೋಡೆ ಪ್ರಕರಣಗಳನ್ನು ಆರೋಪಿ ನಾಸೀರ್ ಹೊಂದಿದ್ದರು. ಮೃತನ ಹಣೆ ಹಾಗೂ ದೇಹದ ಮೇಲೆ ಗಾಯಗಳ ಗುರುತು ಪತ್ತೆಯಾಗಿದೆ. ದುಷ್ಕರ್ಮಿಗಳು ಕೊಲೆ ಮಾಡಿ ಮೃತದೇಹ ನದಿಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ.
ದಕ್ಕೆಯಲ್ಲಿ ನಿರ್ಮಾಣ ಹಂತದ ಕಟ್ಟಡದ ಪಕ್ಕ ನದಿಯಲ್ಲಿ ಶವ ಪತ್ತೆಯಾಗಿದ್ದು, ಪಾಂಡೇಶ್ವರ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಪೊಲೀಸರು ತನಿಖೆ ಆರಂಭಿಸಿದ್ದಾರೆ.

