ನಂಜನಗೂಡು: ಬೈಕ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಂಜನಗೂಡು ತಾಲ್ಲೂಕಿನ ಚಿನ್ನದಗುಡಿಹುಂಡಿ ಗ್ರಾಮದ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಹೆಡತಲೆ ಗ್ರಾಮದ ಕರಿಶೆಟ್ಟಿ (55) ಮೃತ ದುರ್ದೈವಿ. ಕರಿಶೆಟ್ಟಿ ಅವರು ನಂಜನಗೂಡಿನಿಂದ ಹೆಡತಲೆ ಗ್ರಾಮಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಚಿನ್ನದಗುಡಿಹುಂಡಿ ಗ್ರಾಮದ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಿಂಬದಿಯಿಂದ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕರಿಶೆಟ್ಟಿ ಅವರು ಬೈಕ್‌ನಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆ ಕುರಿತು ಮಾಹಿತಿ ತಿಳಿದು ಕವಲಂದೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತಕ್ಕೆ ಕಾರಣವಾದ ಕಾರು ಹಾಗೂ ಬೈಕ್‌ನ್ನು ವಶಕ್ಕೆ ಪಡೆದುಕೊಂಡು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ. ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

