ಬೆಳ್ತಂಗಡಿ: ಮದ್ದಡ್ಕ-ವರಕದೆ ಸಮೀಪ ಕಾರು ಮತ್ತು ಸ್ಕೂಟರ್ ಮುಖಾಮುಖಿ ಢಿಕ್ಕಿ ಹೊಡೆದು ಎರಡೂ ವಾಹನಗಳು ರಸ್ತೆ ಬದಿಯ ಚರಂಡಿಗೆ ಬಿದ್ದ ಪರಿಣಾಮ ಸವಾರರು ಗಾಯಗೊಂಡ ಘಟನೆ ಗುರುವಾರ ನಡೆದಿದೆ.

ಬೆಳ್ತಂಗಡಿಯಿಂದ ಮಡಂತ್ಯಾರು ಕಡೆಗೆ ತೆರಳುತ್ತಿದ್ದ ಸ್ಕೂಟರ್ ಹಾಗೂ ಎದುರಿನಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಕಾರು ಪರಸ್ಪರ ಢಿಕ್ಕಿ ಹೊಡೆದಿವೆ. ಡಿಕ್ಕಿಯ ರಭಸಕ್ಕೆ ಕಾರು ಮತ್ತು ಸ್ಕೂಟರ್ ರಸ್ತೆ ಬದಿಯ ಚರಂಡಿಗೆ ಬಿದ್ದಿವೆ ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ಗಾಯಗೊಂಡ ಸವಾರರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದಿಂದ ಎರಡೂ ವಾಹನಗಳಿಗೆ ಹಾನಿಯಾಗಿದೆ.