ದಕ್ಷಿಣ ಕನ್ನಡ: ಮಹಾತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಪ್ರಧಾನ ದಿನವಾದ ಕಾರ್ತಿಕ ಶುದ್ಧ ಷಷ್ಠಿಯ ಡಿ.7ರ ಶನಿವಾರ ಬೆಳಗ್ಗೆ ಚಂಪಾಷಷ್ಠಿ ಮಹಾರಥೋತ್ಸವ ನೆರೆದಿದ್ದ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಜರುಗಿತು.

ಸುವರ್ಣ ವೃಷ್ಠಿಯಾಗಿ, ಚಿಕ್ಕ ರಥೋತ್ಸವ ಜರುಗಿತು. ಬಳಿಕ ಚಂಪಾಷಷ್ಠಿ ಮಹಾರಥೋತ್ಸವ ಜರುಗಿತು. ಬಳಿಕ ಷಷ್ಠಿ ಕಟ್ಟೆಯಲ್ಲಿ ಮತ್ತು ಒಳಾಂಗಣದ ಕಟ್ಟೆಯಲ್ಲಿ ಅವಳಿ ದೇವರಿಗೆ ಪೂಜೆ ನೆರವೇರಿತು. ಜಿಲ್ಲಾ ಪೊಲೀಸ್ ಹಿರಿಯ ಅಧಿಕಾರಿ ಯತೀಶ್ ಎನ್.ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಾಧಿಕಾರಿ ಜುಬಿನ್ ಮಹಾಪಾತ್ರ, ಶಾಸಕ ಭಾಗೀರಥಿ ಮುರುಳ್ಯ,

ಮಾಜಿ ಸಚಿವ ಬಿ.ರಮಾನಾಥ ರೈ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ, ಕಾರ್ಯನಿರ್ವಹಣಾಧಿಕಾರಿ ಸುತಗುಂಡಿ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್ ಸೇರಿದಂತೆ ಕ್ಷೇತ್ರದ ಭಕ್ತರು ಉಪಸ್ಥಿತರಿದ್ದರು.