ಮಂಗಳೂರು : ಸಹಕಾರ, ತುಳುನಾಡಿನ ಜಾನಪದ ಕ್ರೀಡೆ ಕಂಬಳ, ಕೃಷಿ, ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರಕ್ಕೆ ಕೊಡುಗೆ ನೀಡಿದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಅಪರೂಪದ ವ್ಯಕ್ತಿಗಳಲ್ಲಿ ಒಬ್ಬರಾಗಿರುವ ಕೊಳಕೆ ಇರ್ವತ್ತೂರು ಭಾಸ್ಕರ್ ಎಸ್. ಕೋಟ್ಯಾನ್ ಅವರಿಗೆ ಕರ್ನಾಟಕ ಸರಕಾರದ ಪ್ರತಿಷ್ಠಿತ ಸಹಕಾರ ರತ್ನ ಪ್ರಶಸ್ತಿ-2025 ಲಭಿಸಿದೆ.

ಈ ಹಿನ್ನಲೆಯಲ್ಲಿ ಅವರ ಅಭಿಮಾನಿ ಬಳಗದ ನಾಗರಿಕ ಪೌರ ಸನ್ಮಾನ ಭಾಸ್ಕರಾಭಿನಂದನ ಕಾರ್ಯಕ್ರಮವನ್ನು ಡಿ.6ರಂದು ಮಧ್ಯಾಹ್ನ 3.00ರಿಂದ ಮಂಗಳೂರಿನ ಕುದ್ದುಲ್ ರಂಗರಾವ್ ಪುರಭವನದಲ್ಲಿ ಆಯೋಜಿಸಲಾಗಿದೆ.

ಸಂಜೆ 3.45ಕ್ಕೆ ಆರಂಭವಾಗುವ ಕಾರ್ಯಕ್ರಮದಲ್ಲಿ ಸೊಲೂರು ಮಠದ ಆರ್ಯ ಈಡಿಗ ಮಹಾಸಂಸ್ಥಾನದ ಪೀಠಾಧಿಪತಿ ಶ್ರೀ ವಿಖ್ಯಾತನಂದ ಸ್ವಾಮೀಜಿ ಆಶೀರ್ವಚನ ನೀಡುವರು. ಶಾಸಕರು ಹಾಗೂ ಮಾಜಿ ಸಚಿವ ಸುನಿಲ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.

ಮಂಗಳೂರು ಸಂಸದ ಕ್ಯಾ. ಬ್ರಿಜೇಶ್ ಚೌಟ ದೀಪ ಪ್ರಜ್ವಲನೆ ಮಾಡಲಿರುವರು. ವಿಧಾನಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರು ಭಾಸ್ಕರಾಭಿನಂದನ ಸನ್ಮಾನ ನೆರವೇರಿಸುವರು. ಗೌರವ ಅತಿಥಿಗಳಾಗಿ ಶಾಸಕರಾದ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ, ಕಿಶೋರ್ ಕುಮಾರ್ ಪುತ್ತೂರು, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ,

ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್‌ ಚಂದ್ರ ಡಿ. ಸುವರ್ಣ, ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಸೂರ್ಯಕಾಂತ್ ಜೆ. ಸುವರ್ಣ, ಕೆಎಂಎಫ್ ಅಧ್ಯಕ್ಷ ರವಿರಾಜ್ ಹೆಗ್ಡೆ, ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಲೊಟ್ಟು, ದೀಪಾ ಕಂಫರ್ಟ್ ಆಡಳಿತ ನಿರ್ದೇಶಕರಾದ ಉರ್ಮಿಳಾ ರಮೇಶ್ ಕುಮಾರ್ ಭಾಗವಹಿಸಲಿದ್ದಾರೆ. ಎಂದು ಸಂಘಟಕರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿಯನ್ನ ನೀಡಿದರು.