ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಶ್ರೀ ಮಹಾ ಗಣಪತಿ ಸೇವಾ ಟ್ರಸ್ಟ್ಗೆ ಸೇರಿದ ಕಟ್ಟಡದಲ್ಲಿನ ಅಂಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಪರಸ್ಪರ ಹಲ್ಲೆ, ಸೊತ್ತುಗಳಿಗೆ ಹಾನಿ ಹಾಗೂ ಜೀವ ಬೆದರಿಕೆ ಆರೋಪದಡಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
ಕೊಕ್ಕಡ ನಿವಾಸಿ ಕೃಷ್ಣ ಭಟ್ ನೀಡಿದ ದೂರಿನ ಪ್ರಕಾರ, ಅಕ್ಟೋಬರ್ 18ರಂದು ಬೆಳಗ್ಗೆ ಶ್ರೀ ಮಹಾ ಗಣಪತಿ ಸೇವಾ ಟ್ರಸ್ಟ್ನ ಕಟ್ಟಡದಲ್ಲಿರುವ ಅಂಗಡಿಯಲ್ಲಿ ರಾಘವ ಭಂಡಾರಿ ಹಾಗೂ ಅವರ ಕೆಲಸಗಾರರು ವ್ಯಾಪಾರ ನಡೆಸುತ್ತಿದ್ದರು.
ಈ ವೇಳೆ ಅದೇ ಅಂಗಡಿಯಲ್ಲಿ ಈ ಹಿಂದೆ ವ್ಯಾಪಾರ ನಡೆಸುತ್ತಿದ್ದ ಹರೀಶ್, ಅವರ ಪತ್ನಿ, ಮಕ್ಕಳು ಹಾಗೂ ಇತರರು ಏಕಾಏಕಿ ಅಂಗಡಿಯೊಳಗೆ ಪ್ರವೇಶಿಸಿ, ಸುಮಾರು ₹25 ಸಾವಿರ ಮೌಲ್ಯದ ಕಟ್ಟಡ ಹಾಗೂ ಸೊತ್ತುಗಳಿಗೆ ಹಾನಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

