ಮಂಗಳೂರು: ದಾವಣಗೆರೆ ದಕ್ಷಿಣ ಕ್ಷೇತ್ರ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಸೋಲಿನ ಭೀತಿ ವಿಚಾರವಾಗಿ ಮಂಗಳೂರಿನಲ್ಲಿ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದಾರೆ.
ಪಕ್ಷದಲ್ಲಿ ಕೈಗೊಳ್ಳಲಾದ ಕೆಲ ಕ್ರಮಗಳಿಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ. ಚುನಾವಣಾ ಫಲಿತಾಂಶ ಏನಾಗುತ್ತೆ ಅಂತಾ ಯಾರಿಗೂ ಗೊತ್ತಿಲ್ಲ. ನಾನು ಜ್ಯೋತಿಷಿ ಅಲ್ಲ. ಪಕ್ಷ ವಿರೋಧಿ ಚಟುವಟಿಕೆ ಬಗ್ಗೆ ಪಕ್ಷದ ಚೌಕಟ್ಟಿನಲ್ಲಿ ಕೆಲ ಕ್ರಮ ಕೈಗೊಳ್ಳಲಾಗಿದೆ. ಜಮೀರ್ ಅಹಮ್ಮದ್ ರನ್ನು ಸಚಿವ ಸ್ಥಾನದಿಂದ ಇಳಿಸೋದು ಕೇವಲ ಉಹಾಪೋಹಾ ಎಂದರು.
ಜಮೀರ್ ಅಹಮ್ಮದ್ ಪಕ್ಷದ ಹಿರಿಯ ಮುಖಂಡ. ಪ್ರಾಮಾಣಿಕವಾಗಿ ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ. ಆದ್ರೆ ಕೆಲವರು ಅದಕ್ಕೆ ಬಣ್ಣ ಕಟ್ಟಲು ಹೊರಟಿರಬಹುದು. ಈ ವಿಚಾರಗಳು ಪಕ್ಷದ ಚೌಕಟ್ಟಿನಲ್ಲಿ ಚರ್ಚೆ ಆಗುತ್ತೆ. ಸಿದ್ದರಾಮಯ್ಯ ಟೀಂ ಟಾರ್ಗೆಟ್ ಬಗ್ಗೆ ರಾಜಣ್ಣ ಹೇಳಿಕೆ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ. ಅದನ್ನು ರಾಜಣ್ಣ ಅವರ ಬಳಿ ಕೇಳಬೇಕು. ಇದೆಲ್ಲ ಪಕ್ಷದ ಶಿಸ್ತಿನ ವಿಚಾರ ಎಂದರು.
ಕಾಂಗ್ರೆಸ್ ನಲ್ಲಿ ಯಾರನ್ನು ಟಾರ್ಗೆಟ್ ಮಾಡುವ ಪ್ರಶ್ನೆ ಬರಲ್ಲ. ಕಾಂಗ್ರೆಸ್ ನಲ್ಲಿ ಎಲ್ಲಾ ಧರ್ಮದವರು ಒಂದೇ ಸಮಾನ. ತಪ್ಪಾಗಿದ್ದರೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

