ಮಂಗಳೂರು : ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ರವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ MLC ರವಿಕುಮಾರ್ ವಿರುದ್ಧ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಬಿಜೆಪಿ ಗೆ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು. ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸೌಮ್ಯ ರೆಡ್ಡಿ ಮಾತನಾಡಿ ಶಾಲಿನಿ ರಜನೀಶ್ ರವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ MLC ರವಿಕುಮಾರ್ ರವರ ರಾಜೀನಾಮೆಗೆ ಒತ್ತಾಯಿಸಿದರು.