ಮಂಗಳೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪೆಟ್ರೋಲ್ ಡಿಸೇಲ್ ದರ ಏರಿಕೆ ವಿಚಾರವಾಗಿ ಮಂಗಳೂರಿನಲ್ಲಿ ದ.ಕ.ಜಿಲ್ಲಾ NSUI ಹಾಗೂ ಯೂತ್ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಸಲಾಯಿತು.
ದ.ಕ.ಜಿಲ್ಲಾ NSUI ಹಾಗೂ ಯೂತ್ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ನಗರದ ಕದ್ರಿ ಸರ್ಕಲ್ ಬಳಿ ಪ್ರೊಟೆಸ್ಟ್ ನಡೆಸಲಾಯಿತು. ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಲಾಯಿತು.
ಪ್ರತಿಭಟನೆಯಲ್ಲಿ ಮಾಜಿ ಸಚಿವ ರಮನಾಥ್ ರೈ ಸೇರಿದಂತೆ ಅನೇಕರು ಭಾಗಿಯಾಗಿದ್ದರು. ಪ್ರತಿಭಟನಾ ಸಭೆ ಮುಗಿಯುತ್ತಿದ್ದಂತೆ ಪ್ರತಿಭಟನಾಕಾರರು ರಸ್ತೆ ತಡೆಗೆ ಮುಂದಾದರು. ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು. ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ನೂಕಾಟ ನಡೆಯಿತು. ವಶಕ್ಕೆ ಪಡೆದು ಪೊಲೀಸರು ಬಸ್ ನಲ್ಲಿ ಕರೆದೊಯ್ದರು.

