ಮಂಗಳೂರು : ರಾಜ್ಯದ ಮುಂಗಾರು ಅಧಿವೇಶನಕ್ಕೆ ದಿನಾಂಕ ನಿಶ್ಚಯವಾಗಿದೆ. ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ ಅವರು ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು.

ಮುಂಗಾರು ಅಧಿವೇಶನ ಆಗಸ್ಟ್ 11 ರಿಂದ 22ರವರೆಗೆ ನಡೆಯಲಿದ್ದು, ಮೊದಲ ದಿನ, ಆಗಸ್ಟ್ 11ರಂದು ಬೆಳಗ್ಗೆ 11 ಗಂಟೆಗೆ ಕಲಾಪ ಶುರುವಾಗಲಿದೆ. ಪ್ರಸ್ತುತ 12 ದಿನಗಳ ಕಾಲ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ.

“ಆ.11ರಂದು ಬೆಳಗ್ಗೆ 11ಕ್ಕೆ ಅಧಿವೇಶನ ಆರಂಭವಾಗಲಿದೆ. ಈ ಬಾರಿ 12 ದಿನಗಳ ಕಾಲ ಕಲಾಪ ನಡೆಯಲಿದೆ. ಅವಧಿ ವಿಸ್ತರಣೆ ಹಾಗೂ ಇತರ ನಿರ್ಧಾರಗಳಿಗಾಗಿ ಮುಂದಿನ ವಾರ ಮುಖ್ಯಮಂತ್ರಿಯವರು, ವಿಪಕ್ಷ ನಾಯಕರು ಮತ್ತು ಹಿರಿಯ ನಾಯಕರ ಜೊತೆ ಸಭೆ ನಡೆಯಲಿದೆ.”

ಅಧಿವೇಶನದ ಅವಧಿಯನ್ನು ವಿಸ್ತರಿಸುವ ಕುರಿತು ಹಾಗೂ ಕಲಾಪದ ರೂಪುರೇಷೆಗಳ ಬಗ್ಗೆ ಮುಂದಿನ ವಾರ ಸಮಿತಿ ಸಭೆ ನಡೆಸಲಾಗುತ್ತಿದೆ. ಮುಖ್ಯಮಂತ್ರಿ, ವಿಪಕ್ಷ ನಾಯಕರು ಮತ್ತು ಹಿರಿಯ ನಾಯಕರು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ರಾಜ್ಯದ ರಾಜಕೀಯ ಚಟುವಟಿಕೆಗಳು ಮತ್ತಷ್ಟು ಚುರುಕು ಪಡೆಯುವ ಸಾಧ್ಯತೆ ಇರುವ ಈ ಅಧಿವೇಶನದಲ್ಲಿ ಮಹತ್ವದ ಚರ್ಚೆಗಳು ನಡೆಯಲಿವೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.