ಮಂಗಳೂರು: ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ದೇಶವ್ಯಾಪಿ ‘ವೋಟ್ ಬಚಾವೋ – ದೇಶ್ ಬಚಾವೋ’ ಜನಾಂದೋಲನದ ಅಂಗವಾಗಿ ಮಂಗಳೂರಿನ ಕ್ಲಾಕ್ ಟವರ್ ಬಳಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಬೃಹತ್ ಪ್ರತಿಭಟನಾ ಸಭೆ ನಡೆಯಿತು.

ಪ್ರಜಾಪ್ರಭುತ್ವದ ಮೌಲ್ಯಗಳು, ಸಂವಿಧಾನದ ಆಶಯಗಳು ಹಾಗೂ ಮತದಾನದ ಹಕ್ಕಿನ ಪಾವಿತ್ರ್ಯವನ್ನು ಕಾಪಾಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಘೋಷಣೆಗಳನ್ನು ಕೂಗಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.