ಮಂಗಳೂರು : ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿಯಾದ ಕು. ಭಾಗೀರಥಿ ಮುರುಳ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಡಿದ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ ಅಪರಾಧಿಯನ್ನು ತಕ್ಷಣ ಬಂಧಿಸುವಂತೆ, ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ಉತ್ತರ ಮಂಡಲ ಹಾಗೂ ಮಹಿಳಾ ಮೋರ್ಚಾ ಮಂಗಳೂರು ನಗರ ಉತ್ತರ ಮಂಡಲದ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮತ್ತು ಪೊಲೀಸ್ ಇಲಾಖೆಗೆ ದೂರು ನೀಡಿ ಒತ್ತಾಯಿಸಲಾಯಿತು.


